

ಚಿಕ್ಕೋಡಿ: ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ಸಚಿನ ಮೆಕ್ಕಳಕಿ ಹೇಳಿದರು.
ತಾಲೂಕಿನ ಅಂಕಲಿ ಗ್ರಾಮದ ಕೆಎಲ್‌ಇ ಸಂಸ್ಥೆಯ ಶ್ರೀಮತಿ ಶಾರದಾದೇವಿ ಕೋರೆ ಪದವಿ-ಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರ್ ಶಾಲಾ ವಿದ್ಯಾರ್ಥಿಗಳ ಕಲಾ, ವಾಣಿಜ್ಯ ಉತ್ಸವ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅವಕಾಶ ಸದುಪಯೋಗ ಪಡಿಸಿಕೊಂಡು ಪ್ರತಿಭೆ ಅನಾವರಣಗೊಳಿಸಬೇಕು ಎಂದರು. ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಸುರೇಶ ಪಾಟೀಲ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಕೆಎಲ್‌ಇ ಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದರು. ಕಲಾ, ವಾಣಿಜ್ಯ ಉತ್ಸವ ಹಾಗೂ ವಿಜ್ಞಾನ ವಸ್ತು ಪ್ರದರ್ಶನದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಾಚಾರ್ಯ ಪಿ.ಎಸ್.ತಳವಾರ, ಸಂತೋಷ ಖೋತ, ಕೆ.ಎಸ್.ಗುಡೋಡಗಿ, ಸುಬ್ರಾವ ಎಂಟೆತ್ತಿನವರ ಇತರರಿದ್ದರು.