

ಶಿರ್ವ: ಕೊರಗ ಸಮುದಾಯದ ಜನರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು, ಇದರಿಂದ ಅವರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಅಳಿವಿನಂಚಿನಲ್ಲಿರುವ ಕೊರಗ ಸಮುದಾಯ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಹೇಳಿದರು.
ಪಿಲಾರುಖಾನ ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಅಧ್ಯಕ್ಷ ಸುಶೀಲಾ ನಾಡ, ಕಾಪು ವಲಯ ಕೊರಗ ಅಭಿವೃದ್ಧಿ ಸಂಘದ ಅಧ್ಯಕ್ಷ ಶೇಖರ ಕೊಗರ, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕಾರ್ಯದರ್ಶಿ ಶೀಲಾ ಬಂಟ್ವಾಳ, ಕೋಶಾಧಿಕಾರಿ ವಿನಾಯ ಅಡ್ವೆ, ಕೊರಗ ಮುಖಂಡರಾದ ಮತ್ತಾಡಿ, ಬೊಗ್ರ ಕೊರಗ ಉಪಸ್ಥಿತರಿದ್ದರು.