ಪಿಐಎಲ್ ಬಗ್ಗೆ ಜಾಗೃತಿ ಮೂಡಿಸಿ

gk law
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಜನರ ಹಕ್ಕುಗಳನ್ನು ರಕ್ಷಿಸಲು ಸಾರ್ವಜನಿಕ ಹಿತಾಸಕ್ತಿ ದಾವೆಗಳ (ಪಿಐಎಲ್) ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ವಕೀಲೆ ಲೀನಾ ದಬಿರು ಹೇಳಿದರು.

ಹುಬ್ಬಳ್ಳಿ ಕೆಎಲ್​ಇ ಸಂಸ್ಥೆಯ ಜಿ.ಕೆ. ಕಾನೂನು ಕಾಲೇಜಿನಲ್ಲಿ ಭಾರತದ ಸಂವಿಧಾನ ಮತ್ತು ರಿಟ್ ಅರ್ಜಿಯ ಪ್ರಾಯೋಗಿಕ ಅಂಶಗಳು ಕುರಿತು ಬುಧವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜನರಿಗೆ ಮೂಲಭೂತ ಹಕ್ಕುಗಳ ಬಗ್ಗೆ ತಿಳಿವಳಿಕೆ ಮೂಡಿಸಬೇಕು ಎಂದರು.

ಸುಧಾರಣೆ ಪ್ರಕ್ರಿಯೆ, ನೀತಿ ನಿರೂಪಣೆ ಹಾಗೂ ಸಂವಾದದಲ್ಲಿ ಮುಕ್ತವಾಗಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಬೇಕು. ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ನ್ಯಾಯವನ್ನು ಕಲ್ಪಿಸಿದೆ ಎಂದು ಹೇಳಿದರು.

ಪ್ರಾಚಾರ್ಯ ಡಾ. ದ್ಯಾನೇಶ್ವರ ಚೌರಿ ಅಧ್ಯಕ್ಷತೆ ವಹಿಸಿದ್ದರು. ಡಾ. ದೇವರಾಜ ರಾಯಚೂರ ಇದ್ದರು. ಸ್ವಪ್ನಾ ಸೋಮಯಾಜಿ ಸ್ವಾಗತಿಸಿದರು. ವಿದ್ಯಾರ್ಥಿ ಚಿತ್ರಾ ಭಟ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net