ಬಾಲಕಾರ್ಮಿಕರನ್ನು ಮುಖ್ಯವಾಹಿನಿಗೆ ತನ್ನಿ

mbl 13-1
ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ ಉದ್ಘಾಟಿಸಿದರು. ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ, ಶಶಿಕಾಂತ ಮಾಲಗತ್ತಿ,ಪಿ.ಬಿ.ಗೌಡರ ವಿಶೇಶ ಇತರರಿದ್ದರು.
Published on

ಮುದ್ದೇಬಿಹಾಳ: ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಕಾರ್ಮಿಕ ಇಲಾಖೆ ಅಧಿಕಾರಿಗಳು ಇಂತಹ ಪ್ರಕರಣಗಳಲ್ಲಿ ಮುಲಾಜಿಲ್ಲದೆ ಕ್ರಮವಹಿಸಬೇಕೆಂದು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ ಹೇಳಿದರು.

ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ, ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೊಳಿಸುವ ಉದ್ದೇಶದಿಂದ ಹಲವಾರು ಕಾನೂನುಗಳಿದ್ದರೂ ಇನ್ನೂ ಸಂಪೂರ್ಣ ನಿರ್ಮೂಲನೆಯಾಗದಿರುವುದು ಬೇಸರದ ಸಂಗತಿ. ಬಾಲಕಾರ್ಮಿಕರನ್ನು ಮುಖ್ಯವಾಹಿನಿಗೆ ತರುವುದು ಅತ್ಯಗತ್ಯವಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಮಾತನಾಡಿ, 1986ರಲ್ಲಿ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಜಾರಿಗೆ ಬಂದಿದೆ. 14 ವರ್ಷದೊಳಗಿನ ಮಕ್ಕಳು ಬಾಲ ಕಾರ್ಮಿಕರಾಗುತ್ತಾರೆ. ಕಾಯ್ದೆ ಪ್ರಕಾರ ಬಾಲ ಕಾರ್ಮಿಕರನ್ನು ದುಡಿಸಿಕೊಂಡಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ತಡೆಯುವುದು ಕೇವಲ ಅಧಿಕಾರಿಗಳ ಜವಾಬ್ದಾರಿಯಲ್ಲ, ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ. ಗೌಡರ ವಿಶೇಶ ಉಪನ್ಯಾಸ ನೀಡಿದರು. ಕಾರ್ಮಿಕ ನಿರೀಕ್ಷಕ ಅಲೀಂ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಸಾವಳಗಿ, ಮುಖ್ಯಗುರು ಅನೀಲ ರಾಠೋಡ, ದೈಹಿಕ ಶಿಕ್ಷಕ ಎ.ಸಿ. ಕೆರೂರ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಅರವಿಂದ ಕುಂಬಾರ, ಮಹಾಂತೇಶ ಹಚರೆಡ್ಡಿ ಹಾಗೂ ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net