

ವಿಜಯಪುರ: ಬಾಲ್ಯ ವಿವಾಹ ತಡೆಗಟ್ಟಲು ಶಿಕ್ಷಣ ಇಲಾಖೆ ಪಾತ್ರ ಬಹುಮುಖ್ಯವಾಗಿದ್ದು, ಶಾಲೆ ಬಿಟ್ಟ ಮಕ್ಕಳ ಬಗ್ಗೆ ನಿರಂತರವಾಗಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಬೇಕು. ಅಲ್ಲದೆ, ಬಾಲ್ಯವಿವಾಹದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಶೂನ್ಯಕ್ಕೆ ತರಲು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನಾ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಮಟ್ಟದಲ್ಲಿ ಬಾಲ್ಯವಿವಾಹ ತಡೆಗಟ್ಟಲು ಶಿಕ್ಷಕರು, ಆಶಾ ಕಾರ್ಯಕತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಬಹುಮುಖ್ಯವಾಗಿದೆ.
ಬಾಲ್ಯ ವಿವಾಹ ತಡೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ರಕ್ಷಣಾ ಟಕ ಹಾಗೂ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಬಾಲ್ಯವಿವಾಹ ಪ್ರೋತ್ಸಾಹಿಸುವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ವಯ ಪ್ರಕರಣ ದಾಖಲಿಸುವಂತೆ ಸೂಚಿಸಿದರು.
ಪೋಕ್ಸೋ, ಬಾಲ್ಯವಿವಾಹ, ಲೈಂಗಿಕ ಹಲ್ಲೆ ಮತ್ತು ಅಪಹರಣದಂತ ಟನೆಗಳು ನಡೆಯದಂತೆ ನೋಡಿಕೊಳ್ಳಬೇಕು. ಬಾಲ್ಯ ವಿವಾಹ ತಡೆ ಹಾಗೂ ಪೋಕ್ಸೋ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಕೌನ್ಸಿಲಿಂಗ್ ಹಾಗೂ ವೈದ್ಯಕಿಯ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ, ಬೇಟಿ ಬಚಾವೋ& ಬೇಟಿ ಪಡಾವೋ ಯೋಜನೆಗಳ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕು. ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ರನ್ವಯ ಮುಂಜಾಗೃತಾ ಕ್ರಮ ಕೈಗೊಂಡು ಮಹಿಳೆಯರ ಸಂರಕ್ಷಣೆಗೆ ಆದ್ಯತೆ ನೀಡಬೇಕು. 2024&25 ನೇ ಸಾಲಿನಲ್ಲಿ ದಾಖಲಾದ ಪ್ರಕರಣಗಳನ್ನು ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸೂಕ್ತ ರೀತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸೂಚನೆ ನೀಡಿದರು.
ಜಿ.ಪಂ. ಸಿಇಒ ರಿಷಿ ಆನಂದ ಮಾತನಾಡಿ, ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಮಾತೃವಂದನಾ ಯೋಜನೆಯೆ ನಿರಂತರವಾಗಿ ಪ್ರಗತಿ ಸಾಧಿಸಿ ಗುರಿ ಸಾಧಿಸಬೇಕು. ಗರ್ಭಿಣಿ ಮಹಿಳೆಯರಿಗೆ ಸಮರ್ಪಕವಾಗಿ ಪೌಷ್ಠಿಕ ಆಹಾರ ಒದಗಿಸಬೇಕು.
ಅಂಗನವಾಡಿ, ಆಶಾ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಅವರಿಗೆ ಕಾರ್ಯಗಾರ ಹಮ್ಮಿಕೊಳ್ಳಬೇಕೆಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಜಿಲ್ಲಾ ಶಸ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೋಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕ ಎಸ್.ಜಿ. ಲೋಣಿ, ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರರಿದ್ದರು.