ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತನ್ನಿ

26MAHESH2 (1)
Published on

ಚಾಮರಾಜನಗರ: ಪ್ರತಿಯೊಬ್ಬ ವಿದ್ಯಾರ್ಥಿಗಳು ಕಷ್ಟಪಟ್ಟು ಅಭ್ಯಾಸ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತನ್ನಿ ಎಂದು ವಿದ್ಯಾವಿಕಾಸ ಸ್ವತಂತ್ರ ಪದವಿ ಪೂರ್ವ ಕಾಲೇಜು ಆಡಳಿತಾಧಿಕಾರಿ ಎಸ್.ಎನ್.ಗೌಡ ಸಲಹೆ ನೀಡಿದರು.

ನಗರದ ಜೋಡಿರಸ್ತೆಯಲ್ಲಿರುವ ವಿದ್ಯಾವಿಕಾಸ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಆಯೋಜಿಸಿದ್ದ ಬೀಳ್ಕೋಡುಗೆ ಸಮಾರಂಭ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ಕಲಿಯುವುದರ ಜತೆಗೆ ಮೌಲ್ಯ ಆಧರಿತ ತತ್ವಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಶ್ರೀರಾಮಶೇಷ ಸಂಸ್ಕೃತ ಪಾಠಶಾಲೆ ಪಾಂಶುಪಾಲ ಪ್ರದೀಪ್‌ಕುಮಾರ್‌ದೀಕ್ಷಿತ್ ಮಾತನಾಡಿ, ವಿದ್ಯಾಭ್ಯಾಸದ ಜತೆಗೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪಾಲಕರು ಸಾಲ ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳು ತಪ್ಪು ದಾರಿ ಹಿಡಿದು ತಮ್ಮ ಜೀವನವನ್ನೆ ಹಾಳು ಮಾಡಿಕೊಳ್ಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಂಶಪಾಲ ಬಿ.ಎಸ್.ಕೃಷ್ಣಕುಮಾರ್, ಉದ್ಯಮಿ ಗೋವಿಂದಶೆಟ್ಟಿ, ಉಪನ್ಯಾಸಕ ಜೆ.ಕುಮಾರಿ, ಜೆ.ಕುಸುಮಾ, ಮಹದೇವಪ್ರಭು, ಅನುರಾಜ್, ರಾಜೇಂದ್ರ, ಮೌನಶ್ರೀ, ರಾಜೇಶ್ವರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net