ಸರ್ಕಾರ ನಡೆ ಖಂಡಿಸಿ ;ಬ್ರಾಹ್ಮಣ ಸಮಾಜದ ಬೃಹತ್ ಪ್ರತಿಭಟನೆ

IMG-20250420-WA0014.jpg
Published on

ಬೆಳಗಾವಿ: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣವನ್ನು ಬೆಳಗಾವಿ ಬ್ರಾಹ್ಮಣರ ಸಮಾಜ ತೀವ್ರವಾಗಿ ಖಂಡಿಸಿದ್ದು, ಸೋಮವಾರ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ನಗರದ ಆರ್‌ಪಿಡಿ ಕಾಲೇಜು ಬಳಿಯಿರುವ ಕೃಷ್ಣ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬ್ರಾಹ್ಮಣ ಸಮಾಜದ ಸಭೆಯಲ್ಲಿ ಸಿಇಟಿ ಪರೀಕ್ಷೆಯಲ್ಲಿ ಅಧಿಕಾರಿಗಳ ನಡೆಯನ್ನು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಇತಿಹಾಸದಲ್ಲಿ ಎಂದೂ ಇಂತಹ ಘಟನೆ ನಡೆದಿಲ್ಲ. ಜನಿವಾರ ಕೇವಲ ಬ್ರಾಹ್ಮಣರ ತೊಡುವುದಿಲ್ಲ. ಆರ್ಯರು, ವೈಶ್ಯರು ತೊಡುತ್ತಾರೆ. ಪರೀಕ್ಷೆಯ ನೆಪದಲ್ಲಿ ಜನಿವಾರ ತೆಗಿಸಿರುವುದು ಈ ಮೂವರು ಸಮುದಾಯ ಜನರ ಮತ್ತು ನಂಬಿಕೆಗೆ ಮಾಡಿದ ಅಪಮಾನ. ಬ್ರಾಹ್ಮಣರ ಮೇಲೆ ನಿರಂತರ ದೌರ್ಜನ್ಯಗಳು ನಡೆದುಕೊಂಡು ಬರುತ್ತಿವೆ. ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಏ.21ರಂದು ಬೆಳಗಾವಿ, ಬೀದರ, ದಾವಣಗೆರೆ, ಧಾರವಾಡ ಸೇರಿ ವಿವಿಧ ಜಿಲ್ಲೆಗಳಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಬ್ರಾಹ್ಮಣ ಸಮಾಜ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಬೆಳಗಾವಿ ನಗರದಲ್ಲಿ ಬೆಳಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಭವನದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗೆ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಮಾಜದ ಮುಖಂಡರು ತಿಳಿಸಿದ್ದಾರೆ.

ಕೃಷ್ಣ ಮಠದ ಶ್ರೀನಿವಾಸ ಹೊನ್ನಿದಿಬ್ಬ, ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರಿ, ನ್ಯಾಯವಾದಿ ಎಸ್.ಎಂ.ಕುಲಕರ್ಣಿ, ಆರ್.ಎಸ್.ಮುತಾಲಿಕ, ಉಪಾಧ್ಯಕ್ಷ ಭರತ ದೇಶಪಾಂಡೆ, ಅನುಶ್ರೀ ದೇಶಪಾಂಡೆ, ಮಹೇಶ ಕುಲಕರ್ಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net