

ಕುಂದಾಪುರ: ದಕ್ಷಿಣ ಭಾರತ ಕರಾಟೆ ಫೆಡರೇಶನ್ ವತಿಯಿಂದ ಬೆಂಗಳೂರಿನಲ್ಲಿ ನಡೆದ ನಾಲ್ಕನೇ ದಕ್ಷಿಣ ಭಾರತ ವಲಯ ಕರಾಟೆ ಚಾಂಪಿಯನ್‌ಷಿಪ್ 2025ರ ಕುಮಿಟೆ 67 ಕೆಜಿ, 21 ವರ್ಷದೊಳಗಿನ ವಿಭಾಗದಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್ ಕಂಚಿನ ಪದಕ ಗೆದ್ದಿದ್ದಾರೆ. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.