ಕರಾಟೆ ಪಂದ್ಯಾವಳಿಯಲ್ಲಿ ಕಂಚಿನ ಪದಕ

SPORTS
Published on

ಹಳಿಯಾಳ: ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪಟ್ಟಣದ ಕೆಎಲ್ಎಸ್ ವಿಡಿಐಟಿ ವಿದ್ಯಾರ್ಥಿಗಳು ಎರಡು ಕಂಚಿನ ಪದಕ ಗೆಲ್ಲುವ ಮೂಲಕ ಸಾಧನೆ ತೊರಿದ್ದಾರೆ.

ಸೆ.26ರಂದು ಬೆಂಗಳೂರಿನ ಬಿಐಟಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ಮಹಾವಿದ್ಯಾಲಯದ ವಿನಾಯಕ ಬಿ 60 ಕೆಜಿ ಹಾಗೂ ಪಂಚಮ್ ಎಸ್., 84 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವಿ ಎ ಕುಲಕರ್ಣಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net