ಪೌರ ಕಾರ್ವಿುಕರಿಂದ ಪೊರಕೆ ಚಳವಳಿ

porake chaluvali
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿಯ ಮಹಾನಗರ ಪಾಲಿಕೆ ಕಚೇರಿ ಎದುರು ಗುರುವಾರದಿಂದ ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಪಾಲಿಕೆಯ ನೇರ ಪಾವತಿ ಹಾಗೂ ಗುತ್ತಿಗೆ ಪೌರ ಕಾರ್ವಿುಕರು ಶುಕ್ರವಾರ ಪೊರಕೆ ಚಳವಳಿ ನಡೆಸಿದರು.

ಪೊರಕೆ ಕೈಯಲ್ಲಿ ಹಿಡಿದು ಪಾಲಿಕೆ ವಿರುದ್ಧ ಘೊಷಣೆ ಕೂಗಿದರು. ಮಳೆ ಗಾಳಿ ಚಳಿಯನ್ನು ಲೆಕ್ಕಿಸದೇ ಹಗಲು ರಾತ್ರಿ ಪ್ರತಿಭಟನೆ ನಡೆಸಿದರು ಪಾಲಿಕೆ ಆಯುಕ್ತರು ಸೌಜನ್ಯಕ್ಕೂ ಪ್ರತಿಭಟನಾ ಸ್ಥಳಕ್ಕೆ ಭೇಟ್ಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ವಿುಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಪಾಲಿಕೆಯಲ್ಲಿ ಶನಿವಾರ ಪ್ರಗತಿ ಪರಿಶೀಲನೆ ಸಭೆ ನಡೆಸುತ್ತಿದ್ದು ಪೌರ ಕಾರ್ವಿುಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಚಿವರಲ್ಲಿ ಮನವಿ ಮಾಡುತ್ತೇವೆ. ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ವಿುಕರ ಹಾಗೂ ನೌಕರರ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net