

ಬೆಳಗಾವಿ : 'ಇನ್ನು ಮುಂದೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದ ಮಾತ್ರಕ್ಕೆ ವಿರಮಿಸುವುದಿಲ್ಲ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪಕ್ಷ ಸಂಘಟನೆ ಮಾಡಿ, ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ಶ್ರಮಿಸುತ್ತೇನೆ' ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಚಿಕ್ಕೋಡಿ ತಾಲೂಕಿನ ಮಾಂಜರಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ ವಿಜಯಸಂಕಲ್ಪ ಯಾತ್ರೆ ತೆರಳಿದ ಎಲ್ಲ ಕ್ಷೇತ್ರಗಳಲ್ಲೂ ಅಭೂತಪೂರ್ವ ಬೆಂಬಲ ಸ್ವಾಗತ ದೊಋಯಯತ್ತಿದೆ. 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದರು.
ಮುಖ್ಯಮಂತ್ರಿ ಹುದ್ದೆಯನ್ನು ನಾನೇ ಬಿಟ್ಟುಕೊಟ್ಟಿರುವೆ. ಸೂರ್ಯಚಂದ್ರರು ಪ್ರತಿದಿನ ಬರುವುದಷ್ಟೇ ಸತ್ಯವೋ ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರವುದೂ ಅಷ್ಟೇ ಸತ್ಯ. ಇಡೀ ಜಗತ್ತೆ ಹಾಡಿ ಹೊಗುಳುತ್ತಿರುವ ನರೇಂದ್ರ ಮೋದಿ ಅವರು ನಮ್ಮ ಪ್ರಧಾನಿ ಆಗಿರುವುದು ನಮ್ಮೆಲ್ಲರ ಸುದೈವ. ಕಾಂಗ್ರೆಸ್ ನ ರಾಹುಲ್ ಗಾಂಧಿ ಅವರನ್ನು ನರೇಂದ್ರ ಮೋದಿ ಅವರ ಸ್ಥಾನದಲ್ಲಿ ನೋಡಲು ಹೇಗೆ ಸಾಧ್ಯ? ಎಂದ ಅವರು, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.
ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಶಶಿಕಲಾ ಜೊಲ್ಲೆ, ಗೋವಿಂದ ಕಾರಜೋಳ, ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕ ರಮೇಶ ಜಾರಕಿಹೊಳಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ ಸೇರಿದಂತೆ ಇತರರು ಇದ್ದರು.