

ಮೈಸೂರು: ಯುವ ನಾಯಕ, ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಬಿಜೆಪಿ ಮಾಧ್ಯಮ ವಕ್ತಾರ ಎಂ.ಎ.ಮೋಹನ್ ಸ್ವಾಗತಿಸಿದ್ದಾರೆ.
ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಉತ್ತಮ ನಿರ್ಧಾರ ಕೈಗೊಂಡಿದ್ದಾರೆ.
ರಾಜ್ಯಾದ್ಯಂತ ಅಪಾರ ಅಭಿಮಾನಿ ಬಳಗ ಹೊಂದಿರುವ ಬಿ.ವೈ.ವಿಜಯೇಂದ್ರ ಸಂಘಟನಾ ಚತುರರಾಗಿದ್ದು, ಬಿಜೆಪಿಗೆ ಮತ್ತೆ ತಳಮಟ್ಟದಿಂದ ಶಕ್ತಿ ತುಂಬಲಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಬಲಪಡಿಸುವ ಉದ್ದೇಶದಿಂದ ಯುವ ನಾಯಕ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಉಪಾಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ನೀಡಿದಂತಾಗಿದೆ. ಕಾರ್ಯಕರ್ತರಿಗೆ ಹೊಸ ಚೈತನ್ಯ ತುಂಬಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.