ಕೊಟ್ಟಿಗೆಹಾರದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸ್ಥಗಿತ

MDG2 (7)
Published on

ಮೂಡಿಗೆರೆ: ಕೊಟ್ಟಿಗೆಹಾರದಲ್ಲಿರುವ ಬಿಎಸ್‌ಎನ್‌ಎಲ್ ಟವರ್ ಒಂದು ತಿಂಗಳಿನಿಂದ ತನ್ನ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ಮೊಬೈಲ್ ಸಂಪರ್ಕ, ಆನ್‌ಲೈನ್ ಸೇವೆ ಸ್ತಬ್ದಗೊಂಡಿದ್ದು, ಸಾರ್ವಜನಿಕರು ತೊಂದರೆ ಅನಭವಸುತ್ತಿದ್ದಾರೆ.

ಈ ಭಾಗದಲ್ಲಿ ಹೆಚ್ಚಾಗಿ ಬಿಎಸ್‌ಎನ್‌ಎಲ್ ಮೊಬೈಲ್ ಬಳಸುತ್ತಿರವುದರಿಂದ ಬೇರೆಕಡೆ ಸಂಪರ್ಕ ಸಾಧಿಸುವುದು ಕಷ್ಟಕರವಾಗಿದೆ. ಮೊಬೈಲ್ ನೆಟ್‌ವರ್ಕ್ ಇಲ್ಲದೆ ಬ್ಯಾಂಕ್ ವ್ಯವಹಾರಗಳು, ಆನ್‌ಲೈನ್ ಪಾವತಿಗಳು ಮತ್ತು ವಿದ್ಯಾರ್ಥಿಗಳ ಶಿಕ್ಷಣ ಸಂಬಂಧಿ ಚಟುವಟಿಕೆ ಸ್ಥಗಿತಗೊಂಡಿವೆ. ಈ ಬಗ್ಗೆ ಬಿಎಸ್‌ಎನ್‌ಎಲ್ ಅಧಿಕಾರಿಗಳಿಗೆ ಸ್ಥಳೀಯರು ಹಲವಾರು ಬಾರಿ ಲಿಖಿತವಾಗಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಮೊಬೈಲ್ ಸಂಪರ್ಕ ಅವಲಂಬಿಸಿ ಬಹುತೇಕ ಜನ ನಮ್ಮ ಕಾರ್ಯ ಚಟುವಟಿಕೆ ನಡೆಸುತ್ತಿದ್ದಾರೆ. ಟವರ್ ಸರಿಪಡಿಸಲು ಬಿಎಸ್‌ಎನ್‌ಎಲ್ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕೊಟ್ಟಿಗೆಹಾರದ ವ್ಯಾಪಾರಿ ಅಬ್ದುಲ್ ಖಾದರ್ ಹಾಜಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net