ಹುಮನಾಬಾದ್ ತಹಸೀಲ್ದಾರ್ ಮೇಲಿನ ಹಲ್ಲೆಗೆ ಖಂಡನೆ

310122 Lingasuguru Veerashaiva Jangama Community Appeal
ಲಿಂಗಸುಗೂರು ಎಸಿ ಕಚೇರಿ ತಹಸೀಲ್ದಾರ್ ಶಂಶಾಲಮ್‌ಗೆ ವೀರಶೈವ ಜಂಗಮ ಸಮುದಾಯದ ಪ್ರಮುಖರು ಸೋಮವಾರ ಮನವಿ ಸಲ್ಲಿಸಿದರು.
Published on

ಲಿಂಗಸುಗೂರು: ಬೀದರ್ ಜಿಲ್ಲೆಯ ಹುಮನಾಬಾದ್ ತಹಸೀಲ್ದಾರ್ ಡಾ.ಪ್ರದೀಪಕುಮಾರ ಹಿರೇಮಠ ಮೇಲೆ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿರುವ ಬಿಎಸ್‌ಪಿ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಸಿ ಕಚೇರಿ ತಹಸೀಲ್ದಾರ್ ಶಂಶಾಲಮ್‌ಗೆ ವೀರಶೈವ ಜಂಗಮ ಸಮುದಾಯದ ತಾಲೂಕು ಮುಖಂಡರು ಸೋಮವಾರ ಮನವಿ ಸಲ್ಲಿಸಿದರು.

ಕರ್ತವ್ಯ ನಿರತ ತಹಸೀಲ್ದಾರ್ ಬಿಎಸ್‌ಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿರುವುದು ಖಂಡನೀಯ. ತಹಸಿಲ್ ಕಚೇರಿ ಪ್ರವೇಶಿಸಿ ತಹಸೀಲ್ದಾರ್ ಮೇಲೆ ಹಲ್ಲೆ ಮಾಡಿ ಕಚೇರಿ ಪೀಠೋಪಕರಣಗಳನ್ನು ಧ್ವಂಸಗೊಳಿಸುವ ವಿಡಿಯೋ ವೈರಲ್ ಆಗಿದೆ. ತಾಲೂಕು ದಂಡಾಧಿಕಾರಿ ಮೇಲೆ ಇಂತಹ ವರ್ತನೆ ತೋರಿದರೆ, ಇನ್ನುಳಿದ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಲಿದೆ. ಹೀಗಾಗಿ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ನೈಜ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net