ಗೋಹತ್ಯೆ ನಿಷೇಧ ವಿಧೇಯಕ ಹಿಂಪಡೆಯರಿ

web 4
Published on

ಚಿಕ್ಕಮಗಳೂರು: ಗೋಹತ್ಯೆ ನಿಷೇಧ ವಿಧೇಯಕ ಹಿಂಪಡೆಯುವಂತೆ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಆಗ್ರಹಿಸಿದರು.

ಗೋಹತ್ಯೆ ವಿಧೇಯಕ ವಿರೋಧಿಸಿದ ಶುಕ್ರಚಾರ ಬಿಎಸ್​ಪಿ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿ, ವಿಧೇಯಕ ಜನರ ಆಹಾರದ ಹಕ್ಕು ಕಿತ್ತುಕೊಳ್ಳುತ್ತಿದೆ. ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸಲು ಬಿಜೆಪಿ ನಡೆಸಿರುವ ಹುನ್ನಾರವಾಗಿದೆ. ದನದ ಮಾಂಸದ ರಫ್ತಿನಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಹೀಗಿರುವಾಗ ಭಕ್ಷಣೆ ಯಾವ ಅಪರಾಧವಾಗುತ್ತದೆ ಎಂದು ಪ್ರಶ್ನಿಸಿದರು.

ಅತಿವೃಷ್ಟಿಯಿಂದ ಮನೆ, ಆಸ್ತಿಗಳನ್ನು ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುವಲ್ಲಿ ವಿಫಲವಾಗಿದೆ. ಬಗರ್​ಹುಕುಂ ಸಾಗುವಳಿ ಸಕ್ರಮವಾಗಿಲ್ಲ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಕ್ರಮಕೈಗೊಂಡಿಲ್ಲ ಎಂದರು.

ವಕೀಲ ಪರಮೆಶ್ ಮಾತನಾಡಿ, ಪರಿಶಿಷ್ಟಜಾತಿ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ತಡೆಹಿಡಿಯಲಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಯಾಗಿದೆ. ಇಂತಹ ಸಮಸ್ಯೆಗಳನ್ನು ಪರಿಹರಿಸಬೇಕಿದೆ ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net