ಗುಂಡ್ಲುಪೇಟೆಯಲ್ಲಿ ಬಿಎಸ್‌ವೈ ಹುಟ್ಟುಹಬ್ಬ ಆಚರಣೆ

27-FEB-GPT-1
ಗುಂಡ್ಲುಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಬಿ.ಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ವಿಜಯ ನಾರಾಯಣ ಸ್ವಾಮಿಗೆ ಪೂಜೆ ಸಲ್ಲಿಸಿ ಸಿಹಿ ಹಂಚಿದರು.
Published on

ಗುಂಡ್ಲುಪೇಟೆ: ಬಿಜೆಪಿ ಗುಂಡ್ಲುಪೇಟೆ ಮಂಡಲದ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಗುರುವಾರ ಆಚರಿಸಲಾಯಿತು.

ಕಾರ್ಯಕರ್ತರು ಬಿ.ಎಸ್.ಯಡಿಯೂರಪ್ಪ ಅವರಿಗೆ ಆರೋಗ್ಯ ಹಾಗೂ ದೀರ್ಘಾಯುಷ್ಯ ಕೋರಿ ಪಟ್ಟಣದ ವಿಜಯನಾರಾಯಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ, ಜನರಿಗೆ ಪ್ರಸಾದ ಹಾಗೂ ಸಿಹಿ ಹಂಚಿದರು.

ಬಿಜೆಪಿ ಮಂಡಲದ ಅಧ್ಯಕ್ಷ ಸಿ. ಮಹದೇವಪ್ರಸಾದ್, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಶ್ಯಾನಾಡ್ರಹಳ್ಳಿ, ಮಾಜಿ ಅಧ್ಯಕ್ಷ ಎಲ್.ಸುರೇಶ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎನ್.ಮಲ್ಲೇಶ್, ಪುರಸಭಾ ಸದಸ್ಯ ನಾಗೇಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರೇವಣ್ಣ, ಮುಖಂಡರಾದ ಬಸವೇಶ್, ಬಸವರಾಜ್, ಗೀತಾ, ಎಸ್.ಸಿ. ಮಂಜುನಾಥ್, ಮಂಚಹಳ್ಳಿ ಬಾಬು, ಗೋವಿಂದು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net