ಬಿಎಸ್‌ವೈ ಬರ್ತ್‌ಡೇ: ವಿವಿಧೆಡೆ ವಿಶೇಷ ಪೂಜೆ, ಸೇವಾ ಕಾರ್ಯ

bsy
ಯಡಿಯೂರಪ್ಪ ಜನ್ಮದಿನದ ಅಂಗವಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಒಳರೋಗಿಗಳಿಗೆ ಎಸ್.ಎನ್.ಚನ್ನಬಸಪ್ಪ, ಸುರೇಖಾ ಮುರಳೀಧರ್, ಎಸ್.ದತ್ತಾತ್ರಿ, ಎಸ್.ಜ್ಞಾನೇಶ್ವರ್ ಮುಂತಾದವರು ಹಣ್ಣು ವಿತರಿಸಿದರು.
Published on

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಗುರುವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಜನ್ಮದಿನ ಆಚರಿಸಿದರು.

ರವೀಂದ್ರನಗರದ ಪ್ರಸನ್ನ ಗಣಪತಿ ದೇವಾಲಯದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ ಯಡಿಯೂರಪ್ಪ ಅವರ ದೀರ್ಘಾಯುಷ್ಯಕ್ಕೆ ಪ್ರಾರ್ಥನೆ ಸಲ್ಲಿಸಲಾಯಿತು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಸೂಡಾ ಮಾಜಿ ಅಧ್ಯಕ್ಷರಾದ ಎನ್.ಜೆ.ನಾಗರಾಜ್, ಎಸ್.ಜ್ಞಾನೇಶ್ವರ್, ಎಸ್.ದತ್ತಾತ್ರಿ, ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಬಳ್ಳೇಕೆರೆ ಸಂತೋಷ್, ರಾಜೇಶ್ ಕಾಮತ್, ದಿವಾಕರ ಶೆಟ್ಟಿ, ಸುರೇಖಾ ಪಾಲಾಕ್ಷಪ್ಪ, ಸುರೇಖಾ ಮುರಳೀಧರ್ ಮುಂತಾದವರಿದ್ದರು.

ಮೆಗ್ಗಾನ್‌ನಲ್ಲಿ ಹಣ್ಣು ವಿತರಣೆ:

ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿ ಧನಂಜಯ ಸರ್ಜಿ, ಪಾಲಿಕೆ ಮಾಜಿ ಸದಸ್ಯರಾದ ವಿಶ್ವನಾಥ್, ಪ್ರಭಾಕರ್, ಪ್ರಮುಖರಾದ ದಿವಾಕರ್ ಶೆಟ್ಟಿ. ರಾಜೇಶ್ ಕಾಮತ್‌ಮುಂತಾದವರು ಹಣ್ಣು ವಿತರಿಸಿದರು.

ಶಿವಮೊಗ್ಗದಿಂದ ಪ್ರಯಾಗ್‌ರಾಜ್‌ಗೆ ಕುಂಭಮೇಳದಲ್ಲಿ ಭಾಗವಹಿಸಲು ವಿಶೇಷ ರೈಲಿನಲ್ಲಿ ಶಿವಮೊಗ್ಗದಿಂದ ತೆರಳಿದ್ದ ಯಾತ್ರಿಕರು ಮರಳಿ ಬರುವ ಸಂದರ್ಭದಲ್ಲಿ ಚಿತ್ರದುರ್ಗ ರೈಲ್ವೆ ನಿಲ್ದಾಣದಲ್ಲಿ ಕೇಕ್ ಕತ್ತರಿಸುವ ಮೂಲಕ ಬಿಎಸ್‌ವೈ ಜನ್ಮದಿನ ಆಚರಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಭದ್ರಾವತಿ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್, ದತ್ತ ಕುಮಾರ್, ಶಿವಾನಂದ, ರಾಜೇಶ್, ಭವಾನಿ, ಯಶೋದಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net