

ಕೊಪ್ಪಳ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಯಲ್ಲಯೇ ಇರುತ್ತಾರೆ. ಅವರನ್ನು ಬಳಸಿಕೊಂಡು ನಾವು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತಾಲೂಕಿನ ಬಸಾಪೂರ ಬಳಿಯ ಲಘು ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ರೆಡ್ಡಿ ಗಂಗಾವತಿಯಲ್ಲಿ ಮನೆ ಮಾಡಿರುವುದರಿಂದ ಗೊಂದಲ ಉಂಟಾಗಿರಬಹುದು. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂಬುದನ್ನು ಪಕ್ಷ ನಿರ್ಧರಿಸಲಿದೆ.
ಅವರ ಮೇಲೆ ಕೆಲವೊಂದು ಕೇಸ್ ಗಳಿರುವುದರಿಂದ ಬಿಜೆಪಿಗೆ ಬರುವುದು ವಿಳಂಭವಾಗಿದೆ. ಜನಾರ್ದನ ರೆಡ್ಡಿಯವರ ಜತೆ ಈಗಾಗಲೇ ನಾನು ಮಾತನಾಡಿದ್ದೇನೆ.
ಅವರ ವಿರುದ್ಧದ ಕೇಸ್ ಒಂದೊಂದೇ ಇತ್ಯರ್ಥವಾಗುತ್ತಿದ್ದು, ವರಿಷ್ಠರ ಜತೆ ಮಾತನಾಡಿ, ಅವರನ್ನು ಪಕ್ಷಕ್ಕೆ ಕರೆದುಕೊಳ್ಳಲಾಗುವುದು ಎಂದರು.
ಕಾಂಗ್ರೆಸ್ ನವರು ತಮ್ಮಲ್ಲಿರುವ ಗೊಂದಲ ಬಗೆಹರಿಸಿಕೊಳ್ಳುವುದು ಬಿಟ್ಟು ಬಿಜೆಪಿ ಮೇಲೆ ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ. ನಾನು ಈಗಾಗಲೇ ಮುಖ್ಯಮಂತ್ರಿಯಾದೇ ಎಂದು ಕಾಂಗ್ರೆಸ್ ನ ಕೆಲವರು ತಿರುಕನ ಕನಸು ಕಾಣುತ್ತಿರುವುದು ಸರಿಯಲ್ಲ. ಇನ್ನೂ ಹಗುರವಾಗಿ ಮಾತನಾಡಿದರೇ ಪ್ರಸಿದ್ದಿ ಪಡೆಯುತ್ತೇನೆ ಎನ್ನುವ ಭ್ರಮೆಯಲ್ಲಿ ಪ್ರಿಯಾಂಕ ಖರ್ಗೆ ಇದ್ದಾರೆ.
ಹಾಗಾಗಿ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದೆ ಎನ್ನುತ್ತಿದ್ದಾರೆ. ಅವರ ಮಾತಿನಲ್ಲಿ ಯಾವುದೇ ಉರುಳಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದರು. ರಾಜ್ಯದಲ್ಲಿ ಹಗಲು ರಾತ್ರಿ
ರಾಜ್ಯದಲ್ಲಿ ಬಿಜೆಪಿ ಗಟ್ಟಿಯಾಗಿ ನೆಲೆಯೂರುವಂತೆ ಮಾಡಿದವನಲ್ಲಿ ನಾನು ಒಬ್ಬ. ನನ್ನನ್ನು ನಿರ್ಲಕ್ಷ್ಯ ಮಾಡುವ ಪ್ರಮೇಯವೇ ಇಲ್ಲ. ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ನಾವೆಲ್ಲ ಒಗ್ಗಟ್ಟಾಗಿದ್ದು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದರು.
ನಾನು ಮತ್ತೆ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ. ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ಕೊಟ್ಟು ಹೊರ ಬಂದಿರುವೆ. ಸಾಮಾನ್ಯ ಕಾರ್ಯಕರ್ತ ನಾಗಿದ್ದು, ಪಕ್ಷವನ್ನು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ತರುವೆ. ವಿಜಯೇಂದ್ರಗೆ ಶಿಕಾರಿಪುರ ದಿಂದ ಸ್ಪರ್ಧೆ ಮಾಡಲು ಈಗಾಗಲೇ ಕ್ಷೇತ್ರ ಬಿಟ್ಟುಕೊಡುವುದಾಗಿ ತಿರ್ಮಾನಿಸಿದ್ದೇನೆ. ಆದರೆ, ಪಕ್ಷದ ತಿರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದರು.