ಬಿಎಸ್‌ವೈ ಭೇಟಿಯಾದ ಅಮಿತ್ ಕೋರೆ

11Manjari20-web
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಮಿತ್ ಕೋರೆ ಹೂಗುಚ್ಛ ನೀಡಿ ಅಭಿನಂದಿಸಿದರು. ಮಲ್ಲಿಕಾರ್ಜುನ ಕೋರೆ, ಭರತೇಶ ಬಣವಣೆ ಇತರರಿದ್ದರು.
Published on

ಮಾಂಜರಿ: ಸಹಕಾರ ರಂಗದಲ್ಲಿ ಕ್ರಿಯಾಶೀಲವಾಗಿದ್ದ ಕೆಎಲ್‌ಇ ನಿರ್ದೇಶಕ ಹಾಗೂ ಯುವ ಧುರೀಣ ಅಮಿತ್ ಕೋರೆ ಸಕ್ರಿಯ ರಾಜಕಾರಣಕ್ಕೆ ಕಾಲಿಡಲು ಸಿದ್ಧರಾಗಿದ್ದು, ಚಿಕ್ಕೋಡಿ ಅಥವಾ ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಬೇಕು ಎಂದು ಬಿಜೆಪಿ ವರಿಷ್ಠರ ಬಳಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಕುರಿತು ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆ ಹಿನ್ನೆಲೆಯಲ್ಲಿ ಅಮಿತ್ ಕೋರೆ ಅವರು, ದೆಹಲಿ ಮತ್ತು ಬೆಂಗಳೂರಿನ ಬಿಜೆಪಿ ವರಿಷ್ಠರ ಬಳಿ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದಾರೆ. ಗುರುವಾರ ಅಮಿತ್ ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಲೋಕಸಭೆ ಚುನಾವಣೆ ಕುರಿತು ಮಾತುಕತೆ ನಡೆಸಿದ್ದಾರೆ. ಬಿಜೆಪಿಯಿಂದ ಎರಡು ಬಾರಿ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಲ್ಲಿ ವರ್ಚಸ್ಸು ಇಟ್ಟುಕೊಂಡಿರುವ ಅಮಿತ್ ಅವರ ತಂದೆ ಡಾ.ಪ್ರಭಾಕರ ಕೋರೆ ಸಹ ಬೆಳಗಾವಿ ಜಿಲ್ಲೆಯಲ್ಲಿ ಹಿಡಿತ ಸಾಧಿಸಿದ್ದಾರೆ. ಈಗ ಸ್ವತಃ ಸ್ಪರ್ಧೆ ಬಯಸಿ ಅವರ ಪುತ್ರ ಅಮಿತ್ ಅವರು ಬಿಜೆಪಿ ವರಿಷ್ಠರ ಬಳಿ ಟಿಕೆಟ್ ಕೇಳಿರುವುದು ಕುತೂಹಲ ಮೂಡಿಸಿದೆ. ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ, ನಿರ್ದೇಶಕ ಭರತೇಶ ಬನವಣೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net