ಕಾವೇರಿ ಮಾತೆಗೆ ಬಾಗಿನ ಸಮರ್ಪಣೆ: ಸಿಎಂ ಬಿಎಸ್​ವೈ ದಾಖಲೆ

912732
Published on

ಮೈಸೂರು: ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕೆಆರ್​ಎಸ್​ನಲ್ಲಿ ಕಾವೇರಿ ಮಾತೆಗೆ ಐದನೇ ಬಾರಿ ಬಾಗಿನ ಸಮರ್ಪಣೆ ಮಾಡಿದರು. ವೈದಿಕ ಭಾನುಪ್ರಕಾಶ್ ಶರ್ಮಾ ಅವರು ಬಾಗಿನ ಸಮರ್ಪಣೆಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​ ಟಿ ಸೋಮಶೇಖರ್, ಸಂಸದೆ ಸುಮಲತಾ ಅಂಬರೀಶ್ ಮತ್ತು ಇತರೆ ಗಣ್ಯರು ಸ್ಥಳದಲ್ಲಿ ಹಾಜರಿದ್ದರು.

ಈ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಸಿಎಂ ಬಿಎಸ್​ವೈ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ್ದು, ಬಹಳ ದಿನಗಳ ನಂತರ ಪ್ರವಾಸ ಕೈಗೊಂಡಿದ್ದೇನೆ. ಇನ್ನು ಜಿಲ್ಲಾ ಪ್ರವಾಸವನ್ನೂ ಮಾಡಲಿದ್ದೇನೆ ಎಂದಿದ್ದಾರೆ. ಅದೇ ರೀತಿ ದಸರಾ ಹಬ್ಬ ಆಚರಣೆ ವಿಷಯದ ಬಗ್ಗೆಯೂ ಮಾತನಾಡಿದ್ದು, ಕೋವಿಡ್ ನಿಯಮಗಳಿಗೆ ಅನುಸಾರವಾಗಿ ಹಬ್ಬ ಆಚರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಗೌರಿ ಗಣೇಶ ಹಬ್ಬದ ಪ್ರಯುಕ್ತ ನಾಡಿನ ಜನರಿಗೆ ಶುಭ ಕೋರಿದ ಅವರು, ಎಲ್ಲರೂ ಮನೆಯಲ್ಲೇ ಹಬ್ಬ ಆಚರಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಸಾರ್ವಜನಿಕವಾಗಿ ಆಚರಣೆ ಮಾಡುವಲ್ಲಿ 4 ಅಡಿಗಿಂತ ಹೆಚ್ಚು ಎತ್ತರದ ಗಣೇಶನನ್ನು ಕೂರಿಸಬಾರದು. ನಿಯಮ ಪಾಲನೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net