

ಹುಬ್ಬಳ್ಳಿ : ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಚುನಾವಣೆ ಮುಗಿದಿರುವ ಎಲ್ಲ 14 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳದ್ದೇ ಗೆಲುವು ಆಗಲಿದೆ. ಚುನಾವಣೆ ನಡೆಯಲಿರುವ ಇನ್ನೂ 14 ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದರು.
ಪ್ರಜ್ವಲ ರೇವಣ್ಣ ಹಗರಣ ಕುರಿತು ಉತ್ತರ ನೀಡಲು ನಿರಾಕರಿಸಿದ ಯಡಿಯೂರಪ್ಪ, ನೋ ಕಾಮೆಂಟ್ಸ್ ಎಂದಷ್ಟೇ ಹೇಳಿ ತೆರಳಿದರು.