ರಾಜ್ಯದ ಮೇಲೆ ನಾಯಕರಿಗೆ ಹೆಚ್ಚು ಆಸಕ್ತಿ: ಬಿಎಸ್‌ವೈ

bsy (4) (1)
Published on

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಬಗ್ಗೆ ಬಹಳಷ್ಟು ಆಸಕ್ತಿ ವಹಿಸಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿಗಳು 140ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಪ್ರಚಾರದ ದೃಷ್ಟಿಯಿಂದ ಗೋಡೆ ಬರಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಪ್ರವಾಸದ ವೇಳೆ ಎಲ್ಲೆಡೆ ಅಭೂತಪೂರ್ವ ಎನ್ನಬಹುದಾದ ಸ್ವಾಗತ ಸಿಗುತ್ತಿದೆ. ಇದನ್ನು ಗಮನಿಸಿದರೆ ಮುಂದಿನ ಬಾರಿ ನಾವು ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಹೆಚ್ಚುತ್ತಿವೆ. ನರೇಂದ್ರ ಮೋದಿ ಅವರಂತಹ ನಾಯಕ ಸಿಕ್ಕಿರುವುದು ನಮ್ಮೆಲ್ಲರ ಅದೃಷ್ಟ ಎಂದರು.

ಶಾಸಕ ರಮೇಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರದ್ದು ಎನ್ನಲಾದ ಆಡಿಯೋ ಬಿಡುಗಡೆ ಮಾಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಎಸ್‌ವೈ, ಅದು ವೈಯಕ್ತಿಕ ವಿಚಾರ. ಮೇಲಾಗಿ ಅದರ ಬಗ್ಗೆ ಏನೂ ಮಾಹಿತಿಯಿಲ್ಲ. ಹೀಗಾಗಿ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net