ದೇಗುಲ, ಮಠಕ್ಕೆ ಬಿಎಸ್‌ವೈ ಭೇಟಿ

2 ಎಸ್ಕೆಪಿ 2
Published on

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಶಿಕಾರಿಪುರದಲ್ಲಿ ಕ್ಷೇತ್ರಾಧಿಪತಿ ಶ್ರೀ ಹುಚ್ಚರಾಯಸ್ವಾಮಿ ದರ್ಶನಾಶೀರ್ವಾದ ಪಡೆದರು. ನಂತರ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಉತ್ತರಾರಾಧನೆಯ ಪ್ರಯುಕ್ತ ರಾಯರ ಮಠಕ್ಕೆ ಭೇಟಿ ನೀಡಿ ಮೃತ್ತಿಕಾ ವೃಂದಾವನದ ದರ್ಶನ ಮಾಡಿ ಫಲ ಮಂತ್ರಾಕ್ಷತೆ ಪಡೆದರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಕೆ.ಎಸ್.ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ, ವಸಂತ ಗೌಡ, ಕವಲಿ ಸುಬ್ರಹ್ಮಣ್ಯ, ತಹಸೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net