

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ಸಂಬಂಧಿಸಿದ ವಿಷಯಗಳ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್ನ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರವು ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ಥಾಪಿಸುವ ತೀರ್ಮಾನ ಕೈಗೊಂಡಿರುವುದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ವಾಗತಿಸಿದ್ದಾರೆ.
“ಟ್ರಸ್ಟ್ ರಚಿಸುವ ತೀರ್ಮಾನ ಕೈಗೊಂಡಿರುವುದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ವೈಯಕ್ತಿಕವಾಗಿ ಹಾಗೂ ಕರ್ನಾಟಕ ರಾಜ್ಯದ ಜನತೆಯ ಪರವಾಗಿ ಅಭಿನಂದಿಸುತ್ತೇನೆ. ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚಿಸುವ ಐತಿಹಾಸಿಕ ನಿರ್ಧಾರದ ಮೂಲಕ ಪ್ರಧಾನಿ ನರೇಂದ್ರ ಮೋದಿ ಜಿ ಅವರು ಭಾರತವಷ್ಟೇ ಅಲ್ಲ; ಜಗದಗಲದ ಲಕ್ಷಾಂತರ ಜನರ ಭಾವನಗಳಿಗೆ ಗೌರವ ಸಲ್ಲಿಸಿದ್ದಾರೆ. ಈ ಪುಣ್ಯ ಕಾರ್ಯದಲ್ಲಿ ಕರ್ನಾಟಕಕವು ಸಂಪೂರ್ಣವಾಗಿ ಕೇಂದ್ರದ ಜೊತೆಗಿದೆ” ಎಂದು ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.