ಬುದ್ಧ ಬೆಳದಿಂಗಳು ಕಾರ್ಯಕ್ರಮ

21blrp
Published on

ಬೇಲೂರು : ಡಾ.ಬಿ.ಆರ್.ಅಂಬೇಡ್ಕರ್ ಆಧರ್ಶಗಳನ್ನು ಪಾಲಿಸುವವವರು ಗೌತಮ ಬುದ್ಧರ ಆದರ್ಶಗಳನ್ನು ಪಾಲಿಸಿದಾಗ ಮಾತ್ರ ಅಂಬೇಡ್ಕರ್‌ರವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಬೆಂಗಳೂರಿನ ಅಕ್ಕ ಐಎಎಸ್ ಅಕಾಡೆಮಿ ಮುಖ್ಯಸ್ಥ ಡಾ.ಶಿವಕುಮಾರ್ ಹೇಳಿದರು.

ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಶುಕ್ರವಾರ ಸಂಜೆ ಅಯೋಜಿಸಿದ್ದ ಬುದ್ಧ ಬೆಳದಿಂಗಳು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಉದ್ಯಮಿ ಅರೇಹಳ್ಳಿ ವೀರೂಪಾಕ್ಷ ಮಾತನಾಡಿದರು.  ಮಲೆನಾಡು ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಅತ್ನಿಕೃಷ್ಣ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಬಿಆರ್‌ಸಿ ಶಿವಮರಿಯಪ್ಪ, ಸೋಸಲೇ ಗಂಗಾಧರ್, ಸಮಿತಿಯ ರವಿನಾಯಕ್, ಜಿ.ಆರ್.ರವಿ, ಸಣ್ಣಸ್ವಾಮಿ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net