ಜೇನುಕಲ್ ಶ್ರೀಕ್ಷೇತ್ರದಲ್ಲಿ ಬುದ್ಧ ಪೂರ್ಣಿಮೆ

IMG_20240523_141224
ಬುದ್ಧ ಪೂರ್ಣಿಮೆ ಹಿನ್ನಲೆಯಲ್ಲಿ ಸುಕ್ಷೇತ್ರ ಯಾದಾಪುರ ಶ್ರೀಜೇನುಕಲ್ ಸಿದ್ದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಭಕ್ತರು ಪೂಜೆ ಸಲ್ಲಿಸಿದರು.
Published on

ಅರಸೀಕೆರೆ: ತಾಲೂಕಿನ ಸುಕ್ಷೇತ್ರ ಯಾದಾಪುರ ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಗುರುವಾರ ಬುದ್ಧ ಪೂರ್ಣಿಮೆ ಕಳೆಗಟ್ಟಿತ್ತು.

ಮುಂಜಾನೆಯಿಂದಲೇ ಬೆಟ್ಟ ಹತ್ತಿದ ಭಕ್ತರು ಸಿದ್ದೇಶ್ವರಸ್ವಾಮಿ ಪಾದಗಳಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು. ನೂರೊಂದೆಡೆ, ರುದ್ರಾಭಿಷೇಕ, ಬಿಲ್ವಪತ್ರೆ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಗ್ರಾಮದ ಮಧ್ಯೆ ಇರುವ ಮೂಲ ಸ್ಥಾನಕ್ಕೂ ಭೇಟಿ ನೀಡಿ ಭಕ್ತಿ ಸಮರ್ಪಿಸಿದರು. ತಾಲೂಕು ಪಡಿತರ ವಿತರಕರ ಸಂಘದ ವತಿಯಿಂದ ಪ್ರಸಾದ ವಿನಿಯೋಗ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೆಎಸ್‌ಆರ್‌ಟಿಸಿಯಿಂದ ಬಸ್ ಸೌಲಭ್ಯ ಒದಗಿಸಿದ್ದರೆ, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net