ಬಜೆಟ್ ಅನುದಾನ ಅತ್ಯಲ್ಪ

Published on

ಬೆಳ್ತಂಗಡಿ: ಬಜೆಟ್‌ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದು ಅಭಿನಂದನೀಯ. ಆದರೆ ಇದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತಾಗಿದ್ದು ವಿಷಾದನೀಯ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಹೇಳಿದೆ.

ಸ್ವಾತಂತ್ರೃ ಲಭಿಸಿ 77ವರ್ಷ ಕಳೆದರೂ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಆದಿವಾಸಿ ಪ್ರದೇಶಗಳು ಇನ್ನೂ ವಿದ್ಯುತ್, ರಸ್ತೆ ಸೇರಿದಂತೆ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯಗಳ ಅಭಿವೃದಿಗೆ ಕನಿಷ್ಠ 100 ಕೋಟಿ ಹೆಚ್ಚುವರಿಯಾಗಿ ಬಿಡುಗಡೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿ ನಾಯಕರು ಮಾತ್ರ ನಕ್ಸಲ್ ಶರಣಾಗತಿಗೆ 10 ಕೋಟಿ ಮೀಸಲಿಡಲಾಗಿದೆ ಎಂದು ಸುಳ್ಳು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ಅಧ್ಯಕ್ಷ ವಸಂತ ನಡ, ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ, ಸಂಚಾಲಕ ಶೇಖರ ಲಾಯಿಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net