

ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಸರ್ವ ಜನಾಂಗಕ್ಕೂ ಆಸರೆಯಾಗಿದೆ ಎಂದು ಶಾಸಕ ಕೆಎಂ ಉದಯ್ ಮೆಚ್ಚುಗೆ ವ್ಯಕ್ತಪಡಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಜೆಟ್‌ನಲ್ಲಿ ಮದ್ದೂರು ತಾಲೂಕಿನ ಕೆಮ್ಮಣ್ಣುನಾಲೆಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಮಂಡ್ಯ ಜಿಲ್ಲೆಗೆ ಹೊಸ ಕಾರ್ಖಾನೆ ಸ್ಥಾಪಿಸಲು ಉಲ್ಲೇಖಿಸಲಾಗಿದೆ. ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ ದೊರೆತಿದೆ. ಇಂತಹ ಶಾಶ್ವತ ಕಾರ್ಯಕ್ರಮಗಳ ಜತೆಗೆ ಜನಪರವಾದ ಬಜೆಟ್ ನೀಡಲಾಗಿದೆ ಎಂದು ಹೇಳಿದರು.
ನಾವು ಮಣ್ಣಿನ ಮಕ್ಕಳು, ರೈತರ ಮಕ್ಕಳು ಎಂದು ಬಂದು ಹೋಗುವವರು ಯಾರೂ ಜಿಲ್ಲೆಗೆ ಶಾಶ್ವತ ಕಾರ್ಯಕ್ರಮಗಳನ್ನು ಇದುವರೆಗೂ ಮಾಡಿರಲಿಲ್ಲ. ನಾವು ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಸಂಕಲ್ಪ ಮಾಡಿದ್ದೇವೆ. ಜನಪರ ಬಜೆಟ್ ಅನ್ನು ಸಹಿಸದವರು ಇಲ್ಲಸಲ್ಲದ ಟೀಕೆ ಮಾಡುತ್ತಿದ್ದಾರೆ. ಟೀಕೆ ಮಾಡುವವರಿಗೆಲ್ಲ ನಾವು ಉತ್ತರ ಕೊಡುವುದಿಲ್ಲ ಎಂದರು.