ಎಮ್ಮೆಗೆ ಡಿಕ್ಕಿ ಹೊಡೆದ ಬೈಕ್ ಸವಾರ ಸಾವು

Bike Accident_2
Published on

ಶಿಗ್ಗಾಂವಿ: ಎಮ್ಮೆಗೆ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಶಿಗ್ಗಾಂವಿ-ಸವಣೂರ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ.
ತಾಲೂಕಿನ ಮೆಳ್ಳಾಗಟ್ಟಿ ಪ್ಲಾಟ್‌ನ ನಿವಾಸಿ ಫಕ್ಕೀರಪ್ಪ ಸಹದೇವಪ್ಪ ಬಸವನಾಯ್ಕರ (40) ಮೃತ ಬೈಕ್ ಸವಾರ.
ಈತ ಶಿಗ್ಗಾಂವಿ ಕಡೆಯಿಂದ ಸವಣೂರ ಕಡೆಗೆ ಹೋಗುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಎಮ್ಮೆ ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net