ನಗರಸಭೆ ವ್ಯಾಪ್ತಿಯಲ್ಲೇ ಕಾಲೇಜು ನಿರ್ಮಿಸಿ

Dr Vijaykumar
Published on

ಚಿತ್ರದುರ್ಗ: ಸರ್ಕಾರಿ ವೈದ್ಯಕೀಯ ಕಾಲೇಜಿನ ಕಟ್ಟಡವನ್ನು ಜಿಲ್ಲಾಸ್ಪತ್ರೆ ಆವರಣದ ಹೊರಗೆ ನಿರ್ಮಿಸಬೇಕು. ಈ ಕುರಿತು ಮತ್ತೊಮ್ಮೆ ಮರು ಪರಿಶೀಲಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ಜಾಲಿಕಟ್ಟೆ ಗ್ರಾಮದಲ್ಲಿ ಅಥವಾ ಸೀಬಾರ ಗ್ರಾಮದಲ್ಲಿ ಸರ್ಕಾರಿ ಜಮೀನು ಲಭ್ಯವಿದೆ. ಹೀಗಾಗಿ ನಗರಸಭೆ ವ್ಯಾಪ್ತಿಗೆ ಒಳಪಟ್ಟ ಸ್ಥಳದಲ್ಲೇ ನಿರ್ಮಿಸಿದರೆ ಮುಂದಿನ 100 ವರ್ಷಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಡಾ.ಪಿ.ಟಿ.ವಿಜಯಕುಮಾರ್, ಕಾರ್ಯದರ್ಶಿ ಡಾ.ಕೆ.ಎಂ.ಬಸವರಾಜ್ ಇತರರಿದ್ದರು. ಇದೇ ವಿಚಾರವಾಗಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಕೂಡ ಮನವಿ ಸಲ್ಲಿಸಿದರು. ಸೇನೆ ಜಿಲ್ಲಾ ಅಧ್ಯಕ್ಷ ಕೆ.ಟಿ.ಶಿವಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net