ವ್ಯಸನಮುಕ್ತ ಸಮಾಜ ನಿರ್ಮಿಸಿ

Build an addiction free society
ಜಮಖಂಡಿ ನಗರದ ದೇಸಾಯಿ ವೃತ್ತದಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್, ಜಮಖಂಡಿ ಶಹರ ಪೊಲೀಸ್ ಠಾಣೆ ಆಶ್ರಯದಲ್ಲಿ ಸೋಮವಾರ ನಡೆದ ವ್ಯಸನ ಮುಕ್ತ ಬಾಗಲಕೋಟೆ ಜಿಲ್ಲೆ ಜನ ಜಾಗೃತಿ ಜಾಥಾಗೆ ಡಿಎಸ್‌ಪಿ ಶಾಂತವೀರ ಈ. ಚಾಲನೆ ನೀಡಿದರು.
Published on

ಜಮಖಂಡಿ: ರಾಷ್ಟ್ರದ ಭವಿಷ್ಯ ರೂಪಿಸಬೇಕಾದ ಯುವಜನಾಂಗ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದನೀಯ. ಮಾದಕ ವ್ಯಸನಮುಕ್ತ ಸಮಾಜ ನಿರ್ಮಿಸುವುದರಿಂದ ದೇಶದ ಉನ್ನತಿ ಸಾಧ್ಯ ಎಂದು ಡಿಎಸ್‌ಪಿ ಶಾಂತವೀರ ಈ. ಹೇಳಿದರು.

ನಗರದ ದೇಸಾಯಿ ವೃತ್ತದಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್, ಜಮಖಂಡಿ ಶಹರ ಪೊಲೀಸ್ ಠಾಣೆ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಾದಕ ವ್ಯಸನಮುಕ್ತ ಬಾಗಲಕೋಟೆ ಜಿಲ್ಲೆ ಜನ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ವ್ಯಸನಗಳಿಗೆ ಬಲಿಯಾದವರು ಶಾರೀರಿಕ ಮಾನಸಿಕ ನಿಯಂತ್ರಣ ಕಳೆದುಕೊಂಡು ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ನೋವಿನ ಸಂಗತಿ ಎಂದರು.
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಜನಾಂಗ ಮುಂದಾಗಬೇಕು. ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಪ್ರಚಾರಕರಾಗಿ ಕಾರ್ಯನಿರ್ವಹಿಸಬೇಕು. ಮಾದಕ ವಸ್ತುಗಳ ಮೋಡಿಗೆ ಯುವಜನ ಬಲಿಯಾಗದಂತೆ ಎಚ್ಚರ ವಹಿಸುವ ಉದ್ದೇಶದಿಂದ ಈ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಜಾಗೃತಿ ಜಾಥಾ ದೇಸಾಯಿ ವೃತ್ತದಿಂದ ನಗರದ ಪ್ರಮುಖ ಬೀದಿಗಳಲ್ಲಿ ನಡೆಸಿದರು. ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮಾಜಿ ಯೋಧರು, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net