ವ್ಯಸನಮುಕ್ತ ಸಮಾಜ ನಿರ್ಮಿಸಿ

Build an addiction-free society
ಮುಧೋಳದ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನ ಆವರಣದಲ್ಲಿ ತಾಲೂಕು ಹಿರಿಯ ನಾಗರಿಕರ ವೇದಿಕೆ ಶ್ರಾವಣ ಮಾಸದ ಪ್ರಯಕ್ತ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಎಂ.ಎಚ್.ನದಾಫ ಅವರನ್ನು ಸನ್ಮಾನಿಸಲಾಯಿತು. ತುಳಸಿಗೇರಿಯ ಶ್ರೀರಾಮಾನಂದ ಮಹಾಸ್ವಾಮಿಗಳು, ಎಂ.ಜಿ ದಾಸರ, ಎಸ್.ಆರ್.ದಿವಾಣ ಇದ್ದರು.
Published on

ಮುಧೋಳ: ಯುವಕರು ದುಶ್ಚಟಗಳ ದಾಸರಾಗುತ್ತಿದ್ದಾರೆ. ಮಾವಾ, ಗುಟ್ಖಾ ಸೇವನೆ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು ಎಂದು ವಿಶ್ರಾಂತ ಉಪನಿರ್ದೇಶಕ ಎಂ.ಜಿ.ದಾಸರ ಹೇಳಿದರು.

ನಗರದ ಶ್ರೀ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನ ಆವರಣದಲ್ಲಿ ತಾಲೂಕು ಹಿರಿಯ ನಾಗರಿಕರ ವೇದಿಕೆ ಶ್ರಾವಣ ಮಾಸದ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಧೋಳ ತಾಲೂಕು ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಕಲ್ಲಪ್ಪಣ್ಣ ಸಬರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವಕರು ದುಶ್ಚಟಗಳ ದಾಸರಾಗದಂತೆ ಎಚ್ಚರ ವಹಿಸಬೇಕು. ವ್ಯಸನಿಗಳಾಗುವುದರಿಂದ ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದರು.

ತುಳಸಿಗೇರಿಯ ರಾಮಾನಂದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಎಂ.ಎಚ್.ನದಾಫ ಸೇರಿ ವಿವಿಧ ರಂಗದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯಿತು. ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ದಾಸರಡ್ಡಿ ಪ್ರತಿಜ್ಞಾವಿಧಿ ಬೋಧಿಸಿದರು. ಶ್ರಾವಣ ಮಾಸ ಹಾಗೂ ವ್ಯಸನಮುಕ್ತ ದಿನಾಚರಣೆ ನಿಮಿತ್ತ ಗಣ್ಯರು ಡಾ.ಮಹಾಂತ ಶ್ರೀಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.

ಗೌರವಾಧ್ಯಕ್ಷ ಡಾ.ಸಿದ್ದು ದಿವಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಧೋಳ ಸಂಗೀತ ಪಾಠಶಾಲೆಯ ಹಣಮಂತ ಸೋರಗಾಂವಿ ಹಾಗೂ ತಂಡ ಸಂಗೀತ ಸೇವೆ ನೀಡಿದರು. ಹನುಮಂತ ಮೇತ್ರಿ ಗವಾಯಿಗಳು, ಡಿ.ಕೆ.ಹೊಸಮನಿ, ಶ್ಯಾಮಸುಂದರ, ಎಸ್.ಜಿ.ಹವಾಲ್ದಾರ, ಆರ್.ಸಿ.ಜಾಡರ, ಹಣಮಂತ ಹೊಸೂರ, ಕೆ.ವೈ.ಭೂಸರಡ್ಡಿ, ವಿಠ್ಠಲ ಮೋರೆ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ ನಿಡೋಣಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net