ಪೌರ ಕಾರ್ಮಿಕರಿಂದ ಆರೋಗ್ಯ ಸಮಾಜ ನಿರ್ಮಾಣ

24ark-1
ಅರಕಲಗೂಡಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎ.ಮಂಜು ಪೌರಕಾರ್ಮಿಕರಿಗೆ ಸರ್ಕಾರಿ ಭತ್ಯೆಯ ಚೆಕ್ ಅನ್ನು ವಿತರಿಸಿದರು. ಹೂವಣ್ಣ, ಕೃಷ್ಣಯ್ಯ, ರಶ್ಮಿ, ಪ್ರದೀಪ್‌ಕುಮಾರ್ ಇತರರು ಇದ್ದರು.
Published on

ಅರಕಲಗೂಡು: ಸ್ವಚ್ಛತೆ ಹಾಗೂ ಜನರ ಸುರಕ್ಷತೆಗೆ ಹಗಲಿರುಳು ಶ್ರಮಿಸುವ ಪೌರ ಕಾರ್ಮಿಕರ ಸೇವೆ ಅನನ್ಯವಾದುದು ಎಂದು ಶಾಸಕ ಎ.ಮಂಜು ಅಭಿಪ್ರಾಯಪಟ್ಟರು.

ಪಟ್ಟಣ ಪಂಚಾಯಿತಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪೌರ ಕಾರ್ಮಿಕರ ಶ್ರಮದಿಂದ ಮಾತ್ರ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಇಂತಹ ಕಾಯಕ ಯೋಗಿಗಳನ್ನು ಗೌರವಿಸಬೇಕು. ಸ್ವಚ್ಛತೆ, ಜನರ ಸುರಕ್ಷತೆಗೆ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಸೇವೆಗೆ ಬೆಲೆ ಕಟ್ಟಲಾಗದು ಎಂದರು.

ಪಪಂ ಸದಸ್ಯರಾದ ಹೂವಣ್ಣ, ರಶ್ಮಿ, ಲಕ್ಷ್ಮೀ, ಕೃಷ್ಣಯ್ಯ, ಪ್ರದೀಪ್‌ಕುಮಾರ್, ನಿಖಿಲ್‌ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net