

ಹಾವೇರಿ: ನಿರ್ಮಾಣ ಹಂತದ ಗೋಡೆ ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.
ಗ್ರಾಮದ ಮಕಬೂಲಸಾಬ ಬಾಬುಸಾಬ ಗುತ್ತಲ (55) ಮೃತ ಕಾರ್ಮಿಕ.
ಈತ ಕಟ್ಟಡ ನಿರ್ಮಿಸುತ್ತಿದ್ದ ಸಮಯದಲ್ಲಿ ಗೋಡೆ ಕುಸಿದು ಈತನ ಮೇಲೆ ಬಿದ್ದಿದ್ದು, ಇದರಿಂದ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.