ಕೇರಳದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ : ಒಡಯಂಚಾಲಿನಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ

New Project (24)
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ನವಕೇರಳ ಯೋಜನೆಯನ್ವಯ ಎಲ್ಲ ಜನರಿಗೆ ಸಾಮಾಜಿಕ ನ್ಯಾಯ ಆಧರಿಸಿದ ಅಭಿವೃದ್ಧಿಯನ್ನು ನಾಡಿನ ಮೂಲೆಗೆ ತಲುಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಕೋಡೋಂ-ಬೇಲೂರು ಗ್ರಾಮ ಪಂಚಾಯಿತಿಯ ಒಡಯಂಚಾಲಿನಲ್ಲಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ಮತ್ತು ವಾಣಿಜ್ಯ ಸಂಕೀರ್ಣ ಯೋಜನೆಯ ಮೊದಲ ಹಂತದಲ್ಲಿ ಪೂರ್ಣಗೊಂಡ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಕಾಞಂಗಾಡು ಶಾಸಕ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಂ.ರಾಜಗೋಪಾಲನ್, ಜಿಪಂ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್, ಪರಪ್ಪ ಬ್ಲಾಕ್ ಪಂಚಾಯಿತಿ ಅಧ್ಯಕ್ಷೆ ಎಂ.ಲಕ್ಷ್ಮೀ, ಉಪಾಧ್ಯಕ್ಷ ಕೆ.ಭೂಪೇಶ್, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಶಕುಂತಳಾ, ಜಿಪಂ ಸದಸ್ಯ ಶಿನೋಜ್ ಚಾಕೊ, ಕೋಡೋಂಬೆಲೂರು ಗ್ರಾಪಂ ಉಪಾಧ್ಯಕ್ಷ ಪಿ.ದಾಮೋದರನ್, ಪಂಚಾಯಿತಿ ಸಹಾಯಕ ನಿರ್ದೇಶಕ ಟಿ.ಟಿ.ಸುರೇಂದ್ರನ್, ಬ್ಲಾಕ್ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ರಜಿನಿ ಕೃಷ್ಣನ್, ಸಮಿತಿ ಅಧ್ಯಕ್ಷರಾದ ಕೆ.ಶೈಲಜಾ, ಪಿ.ಗೋಪಾಲಕೃಷ್ಣನ್, ಎನ್.ಎಸ್.ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು. ಕೋಡೋಂ- ಬೇಲೂರ್ ಗ್ರಾಪಂ ಉಪಾಧ್ಯಕ್ಷೆ ಪಿ.ಶ್ರೀಜಾ ಸ್ವಾಗತಿಸಿದರು. ಗ್ರಾಪಂ ಕಾರ್ಯದರ್ಶಿ ಎಸ್.ಜಿ.ವಿಪಿನ್ ವಂದಿಸಿದರು.

ಜಗತ್ತಿನಲ್ಲಿ ಕೆಲವೇ ದೇಶಗಳು ಮಾತ್ರ ಸಾಧಿಸಿರುವ ತೀವ್ರ ಬಡತನದಿಂದ ಮುಕ್ತವಾಗುವ ಗುರಿಯನ್ನು ಕೇರಳ ನ.1ರಂದು ಸಾಕಾರಗೊಳಿಸಲಿದೆ. ಈ ಮೂಲಕ ಕೋಡೋಂ ಬೇಲೂರು ಗ್ರಾಮ ಪಂಚಾಯಿತಿ ಸೇರಿದಂತೆ ಕಾಸರಗೋಡು ಜಿಲ್ಲೆ ತೀವ್ರ ಬಡತನದಿಂದ ಮುಕ್ತವಾಗಿಸುವ ಗುರಿ ತಲುಪಲಿದೆ. ಪಿಣರಾಯಿ ವಿಜಯನ್, ಮುಖ್ಯಮಂತ್ರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net