ಶಾಲಾ ಕಟ್ಟಡ ದುರಸ್ತಿಗೆ ಅನುದಾನ ನೀಡಿ

10-DVD-8
Published on

ದೇವದುರ್ಗ: ತಾಲೂಕಿನ ವಿವಿಧ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕೊಠಡಿಗಳು ಮಳೆಗೆ ಸೋರುತ್ತಿದ್ದು, ತುರ್ತು ದುರಸ್ತಿಗಾಗಿ ಅನುದಾನ ಬಿಡುಗಡೆ ಮಾಡುವಂತೆ ರಾಯಚೂರಿನಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕಗೆ ಶಾಸಕಿ ಕರೆಮ್ಮ ಜಿ.ನಾಯಕ ಇತ್ತೀಚೆಗೆ ಭೇಟಿ ಮಾಡಿ ಒತ್ತಾಯಿಸಿದರು.

ಕೊಠಡಿಗಳು ಸೋರುವುದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರದಾಡುವ ಸ್ಥಿತಿಯಿದೆ. ತುರ್ತು ಅನುದಾನ ಬಿಡುಗಡೆ ಮಾಡಿದರೆ ಕಟ್ಟಡಗಳ ತಾತ್ಕಾಲಿಕ ದುರಸ್ತಿ ಮಾಡಬಹುದು. ಶಿಕ್ಷಕರ ವರ್ಗಾವಣೆಯಿಂದ ಆಗುತ್ತಿರುವ ತೊಂದರೆಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಚುನಾವಣೆಗೆ ನ್ಯಾಯಾಲಯ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net