ಮುಂಡರಗಿಯಲ್ಲಿ ಗುಡುಗು-ಸಿಡಿಲಿನ ಆರ್ಭಟದ ಮಳೆ, ಎತ್ತು, ಎಮ್ಮೆ, ಮೂರು ಕುರಿಗಳ ಸಾವು

20MDG2B MALE
Published on

ಮುಂಡರಗಿ: ಪಟ್ಟಣ ಸೇರಿ ತಾಲೂಕಿನ ಹಲವೆಡೆ ಶನಿವಾರ ಗುಡುಗು- ಸಿಡಿಲು ಸಹಿತ ಮಳೆ ಸುರಿಯಿತು.
ಮಳೆ ಜತೆಗೆ ಬೀಸಿದ ಭಾರಿ ಗಾಳಿಗೆ ಹಲವು ಕಡೆ ಮರಗಳು, ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿತ್ತು.
ತಾಲೂಕಿನ ಕಲಕೇರಿ ಗ್ರಾಮದಲ್ಲಿ ಸಿಡಿಲು ಬಡಿದು 3 ಕುರಿಗಳು ಮೃತಪಟ್ಟಿವೆ. ಕೆಲೂರು ಗ್ರಾಮದಲ್ಲಿ ಒಂದು ಎಮ್ಮೆ ಹಾಗೂ ಒಂದು ಎತ್ತು ಮೃತಪಟ್ಟಿವೆ. ಸ್ಥಳಕ್ಕೆ ಕಂದಾಯ ಇಲಾಖೆ, ಪಶು ಇಲಾಖೆ, ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹಿರೇವಡ್ಡಟ್ಟಿ ಗ್ರಾಮದಲ್ಲಿ 3 ವಿದ್ಯುತ್ ಕಂಬಗಳು, ಬೂದಿಹಾಳದಲ್ಲಿ 2 ವಿದ್ಯುತ್ ಕಂಬಗಳು ಧರಗೆ ಉರುಳಿ ವಿದ್ಯುತ್ ವ್ಯತ್ಯಯು ಉಂಟಾಯಿತು. ಹೆಸ್ಕಾಂ ಸಿಬ್ಬಂದಿ ಕಂಬ ಬದಲಿಸುವ ಕೆಲಸದಲ್ಲಿ ನಿರತರಾದರು. ಕೆಲವೆಡೆ ಅಲ್ಲಲ್ಲಿ ಗಿಡ-ಮರ ಬಿದ್ದಿವೆ. ಚರಂಡಿಗಳೆಲ್ಲ ತುಂಬಿ ರಸ್ತೆಯ ಮೇಲೆ ಹರಿದವು. ರಸ್ತೆಯಲ್ಲಿ ತಗ್ಗು ಗುಂಡಿಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸಂಚಾರಕ್ಕೆ ತೊಂದರೆಯಾಯಿತು. ತಾಲೂಕಿನಲ್ಲಿ ಸಂಪೂರ್ಣ ಮೋಡ ಕವಿದ ವಾತಾವರಣವಿದ್ದು, ಕೆಲವಡೆ ಸಾಧಾರಣ ಮಳೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net