

ಬೆಳಗಾವಿ: ಚಿತ್ರನಟರೊಬ್ಬರ ಮೇಲೆ ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾದ ಪ್ರಕರಣವೊಂದು ನಡೆದಿದೆ. ನಟನ ಮನೆ ಮುಂದೆಯೇ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.
'ಅಮೃತಸಿಂಧು' ಸಿನಿಮಾದಲ್ಲಿ ಅಭಿನಯಿಸಿದ್ದ ಚಿತ್ರನಟ, ಉದ್ಯಮಿ ಶಿವರಂಜನ್ ಬೋಳಣ್ಣವರ್ ಮೇಲೆ ಈ ಗುಂಡಿನ ದಾಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಹಳೇ ಹಣಮಂತ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.
ಬೈಕ್ನಲ್ಲಿ ಬಂದಿದ್ದ ಇಬ್ಬರು ಮೂರರಿಂದ ನಾಲ್ಕು ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಅದೃಷ್ಟವಶಾತ್ ಗುಂಡು ತಾಗದ್ದರಿಂದ ಶಿವರಂಜನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ನಾಲ್ಕು ತಂಡ ರಚನೆ ಮಾಡಲಾಗಿದ್ದು, ಪೊಲೀಸರು ತನಿಖೆಗಿಳಿದಿದ್ದಾರೆ.