

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಬಂಟರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಬುಧವಾರ ನಗರದ ಆರ್.ಎನ್. ಶೆಟ್ಟಿ ಸಭಾಭವನದಲ್ಲಿ ಜರುಗಿತು.
2024- 26ನೇ ಸಾಲಿನ ಸಂಘದ ಅಧ್ಯಕ್ಷರಾಗಿ ವಿಜಯಾನಂದ ಶೆಟ್ಟಿ, ಉಪಾಧ್ಯಕ್ಷರಾಗಿ ಕೆ. ಸುರೇಶ್ ಶೆಟ್ಟಿ, ರಾಜೇಂದ್ರ ವಿ. ಶೆಟ್ಟಿ, ಕಾರ್ಯದರ್ಶಿಯಾಗಿ ಹರ್ಷ ಕುಮಾರ ಶೆಟ್ಟಿ, ಸಹ ಕಾರ್ಯದರ್ಶಿಯಾಗಿ ರತ್ನಾಕರ ಎಂ. ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.