ಬಂಟರ ಮಾತೃ ಸಂಘದ ಗಣೇಶೋತ್ಸವ

mng-19sep-bunts ganapa
Published on



ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಬಂಟ್ಸ್ ಹಾಸ್ಟೆಲ್ನ
ಓಂಕಾರ ನಗರದಲ್ಲಿ ಮಂಗಳವಾರ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆಗೊಂಡಿತು.
ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜೈರಾಜ್ ಬಿ ರೈ ಮತ್ತು ಸೌಮ್ಯ ಜೆ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜವನ್ನು ಒಂದುಗೂಡಿಸಲು ಸಾರ್ವಜನಿಕ ಗಣೇಶೋತ್ಸವ ಪ್ರೇರಣೆಯಾಗುತ್ತದೆ ಎಂದು ಜೈರಾಜ್ ಬಿ ರೈ ಹೇಳಿದರು.
ಮಣಿಪಾಲದ ಶ್ರೀವೈಷ್ಣವಿ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ ಜಯರಾಜ್ ಹೆಗ್ಡೆ, ಅಮ್ಮಣ್ಣಿ ಜೆ ಹೆಗ್ಡೆ ತೆನೆ ವಿತರಿಸಿದರು. ಮೇಜರ್ ಶಶಿಧರ ಆಳ್ವ ಧ್ವಜಾರೋಹಣ ನೆರವೇರಿಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ
ಕಾರ್ಯದರ್ಶಿ ಕೆ ಎಂ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ ನಾಗರಾಜ ಶೆಟ್ಟಿ, ಬಿ ಶೇಖರ ಶೆಟ್ಟಿ, ಸುಧಾಕರ ಎಸ್ ಪೂಂಜ, , ವಸಂತ ಶೆಟ್ಟಿ, ಶರ್ಮಿಳಾ ಎಸ್ ಆಳ್ವ, ಭಾರತಿ ಜಿ ಶೆಟ್ಟಿ, ಅರುಣಾ ಎಸ್ ಶೆಟ್ಟಿ, ಡಾ.ಆಶಾಜ್ಯೋತಿ ರೈ ಉಪಸ್ಥಿತರಿದ್ದರು. ಸಾರ್ವಜನಿಕರಿಗೆ ತೆನೆ ವಿತರಿಸಲಾಯಿತು.
ಮಂಗಳೂರು ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ ಸ್ವಾಗತಿಸಿ, ಉಮೇಶ್ ರೈ ಪದವು ಮೇಗಿನಮನೆ ವಂದಿಸಿದರು.
ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ಮತ್ತು ಕವಿತಾ ಪಕ್ಕಳ ಕಾರ್ಯಕ್ರಮ ನಿರೂಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net