ಡಿ.7ರಂದು ಮುಂಬೈಯಲ್ಲಿ ವಿಶ್ವಬಂಟರ ಸಮಾಗಮ

mng-16oct-bunts
Published on



ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಂಬೈಯಲ್ಲಿ ವಿಶ್ವ ಬಂಟರ ಸಮಾಗಮ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮುಂಬೈಯ ಕುರ್ಲಾ ಬಂಟರ ಭವನದಲ್ಲಿ ನಡೆಯಿತು. ಮುಂಬೈ ಮಹಾನಗರದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳನ್ನು ಒಟ್ಟು ಸೇರಿಸುವ ಉದ್ದೇಶದಿಂದ ಡಿ.7ರಂದು ಕುರ್ಲಾ ಬಂಟರ ಭವನದಲ್ಲಿ ವಿಶ್ವ ಬಂಟರ ಸಮಾಗಮ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆಯಿಂದ ಸಾಯಂಕಾಲದವರೆಗೆ ವೈವಿಧ್ಯಮಯ
ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ ನಡೆಯಲಿದೆ. ಕಾರ್ಯಕ್ರಮವನ್ನು ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್‌ಭೋಜ ಶೆಟ್ಟಿ ಉದ್ಘಾಟಿಸಲಿದ್ದಾರೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.
ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ ‘ ಕಾರ್ಯಕ್ರಮ ಸಮಿತಿಯ ಕಾರ್ಯಧ್ಯಕ್ಷರಾಗಿ ಡಾ.ಆರ್.ಕೆ. ಶೆಟ್ಟಿ
ಕಾರ್ಯನಿರ್ವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಘಟಕರಿಗೆ ಜವಾಬ್ದಾರಿ ನೀಡಲಾಗುವುದು ಎಂದರು.
ಸಭೆಯಲ್ಲಿ ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರಾದ ರತ್ನಾಕರ ಶೆಟ್ಟಿ ಮುಂಡ್ಕೂರು, ಸುಬ್ಬಯ್ಯ ಶೆಟ್ಟಿ, ಭಾಸ್ಕರ ಶೆಟ್ಟಿ , ಶಶಿಧರ ಶೆಟ್ಟಿ ಇನ್ನಂಜೆ, ರವೀಂದ್ರನಾಥ ಭಂಡಾರಿ, ಇಂದ್ರಾಳಿ ದಿವಾಕರ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಸುಕುಮಾರ್ ಶೆಟ್ಟಿ, ರಾಜೀವ ಭಂಡಾರಿ, ಕರ್ನೂರು ಮೋಹನ್ ರೈ, ನವೀನ್ ಶೆಟ್ಟಿ ಇನ್ನ ಬಾಳಿಕೆ, ಅಶೋಕ್ ಪಕ್ಕಳ ಉಪಸ್ಥಿತರಿದ್ದರು.
ಇದೇ ಸಂದರ್ಭ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರನ್ನು ಒಕ್ಕೂಟದ ವತಿಯಿಂದ ಗೌರವಿಸಲಾಯಿತು.ಗೌರವ ಕಾರ್ಯದರ್ಶಿ ಉಳ್ತೂರು ಮೋಹನದಾಸ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net