ಬಂಟರ ಸಂಘದ ಮಹಿಳಾ ಘಟಕ ಉದ್ಘಾಟನೆ

mng-28oct-bunts
Published on


ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಆರಂಭವಾದ ನೂತನ ಮಹಿಳಾ ಘಟಕವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿದರು.
ನೂತನ ಮಹಿಳಾ ಘಟಕಕ್ಕೆ ಮಾತೃ ಸಂಘದ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.
ಘಟಕದ ಗೌರವ ಸಲಹೆಗಾರರಾದ ಡಾ. ಆಶಾ ಜ್ಯೋತಿ ರೈ ಮಾತನಾಡಿ, ಪರಸ್ಪರ ಸಹಕಾರದಿಂದ ಯಶಸ್ಸು ಸಾಧ್ಯ ಎಂದರು.
ಮಹಿಳಾ ಘಟಕದ ಅಧ್ಯಕ್ಷೆ ಸಬಿತಾ .ಆರ್.ಶೆಟ್ಟಿ ಅವರು ನೂತನ ಮಹಿಳಾ ಘಟಕಕ್ಕೆ ಸರ್ವರ ಸಹಕಾರ ಕೋರಿದರು. ವೀಣಾ ಟಿ. ಶೆಟ್ಟಿ ಅವರು ಬಂಟರ ಉಡುಗೆ-ತೊಡುಗೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.ಮಾತೃ ಸಂಘದ ಖಜಾಂಚಿ ಸಿಎ ರಾಮಮೋಹನ್ ರೈ, ತಾಲೂಕು ಸಮಿತಿಯ ಉಪ ಸಂಚಾಲಕ ರತ್ನಾಕರ ಶೆಟ್ಟಿ ಎಕ್ಕಾರು, ಮಹಿಳಾ ಘಟಕದ ಉಪಾಧ್ಯಕ್ಷೆ ಸುಲತಾ ಜೆ.ಶೆಟ್ಟಿ, ಜತೆ ಕಾರ್ಯದರ್ಶಿ ಮಾನಸ ರೈ, ಕೋಶಾಧಿಕಾರಿ ಭಾರತಿ ಶೆಟ್ಟಿ, ಕಸ್ತೂರಿ ಶೆಟ್ಟಿ ವಿಜಯಲಕ್ಷ್ಮಿ ರೈ ಉಪಸ್ಥಿತರಿದ್ದರು.
ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ ಸ್ವಾಗತಿಸಿ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ವೃಂದಾ. ಎಸ್.ಹೆಗ್ಡೆ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್‌ಬೈಲ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net