

ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಬಂಟ್ಸ್ ಹಾಸ್ಟೆಲ್ ವತಿಯಿಂದ ಸೆ.29ರಂದು ಬೆಳಗ್ಗೆ 9.39ಕ್ಕೆ ಬಂಟ್ಸ್ ಹಾಸ್ಟೆಲ್‌ನ ಶ್ರೀ ರಾಮಕೃಷ್ಣ ಶಾಲಾ ಮೈದಾನದಲ್ಲಿ ಬಂಟ ಕ್ರೀಡಾಕೂಟ ನಡೆಯಲಿದೆ. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ.
ಮಕ್ಕಳಿಗೆ, ಯುವಕರಿಗೆ, ಯುವತಿಯರಿಗೆ ವಿವಿಧ ಆಟೋಟ ಸ್ಫರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕ್ರೀಡಾ ಸಂಘಟಕ ಕಿರಣ್ ಪಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
.................