ಕಿಟಕಿ ಮುರಿದು ಮನೆಗಳ್ಳತನ

crime
Published on

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಸಿದ್ದೇಶ್ವರ ಪಾರ್ಕ್‌ನಲ್ಲಿ ಅಡುಗೆ ಮನೆ ಹತ್ತಿರದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು, 1.11 ಲಕ್ಷ ರೂ. ಮೌಲ್ಯದ ಆಭರಣ ಹಾಗೂ 38 ಸಾವಿರ ರೂಪಾಯಿ ನಗದು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ವಿದ್ಯಾನಗರದ ಚಂದ್ರನಾಥ ಬಸ್ತಿ ಎಂಬುವರ ಮನೆ ಕಳ್ಳತನವಾಗಿದೆ. 27.80 ಗ್ರಾಂ ತೂಕದ ಬೆಳ್ಳಿ ಆಭರಣ, 38 ಸಾವಿರ ನಗದು ಕಳ್ಳತನವಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net