ಬಾಗಿಲ ಚಿಲಕ ಮುರಿದು ಕಳ್ಳತನ

Ksd_Temple Theft
Published on

ಕುಂದಾಪುರ: ಕುಂದಾಪುರ ತಾಲೂಕಿನ ಆನಗಳ್ಳಿ ಗ್ರಾಮದ ಹೇರಿಕುದ್ರು ಎಂಬಲ್ಲಿ ಮನೆಯ ಬಾಗಿಲಿನ ಚಿಲಕ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ.

ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವಾಚ್‌ಮನ್ ಕೆಲಸ ಮಾಡಿಕೊಂಡಿದ್ದ ಆನಗಳ್ಳಿ ಗ್ರಾಮದ ಆಸ್ಟೀನ ಡಿಅಲ್ಮೇಡ ಎಂಬುವರು ಮಂಗಳವಾರ ಬೆಳಗ್ಗೆ ಕೆಲಸಕ್ಕೆ ಹೋಗಿದ್ದು,ಸಂಜೆ ಬಂದಾಗ ಬಾಗಿಲಿನ ಚೀಲಕ ಒಡೆದಿರುವುದು ಕಂಡುಬಂದಿದೆ. ಮನೆ ಒಳಗಡೆ ಹೋಗಿ ನೋಡಿದಾಗ ಸೊತ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು ಕಪಾಟಿನಲ್ಲಿ ಇರಿಸಿದ್ದ ಸುಮಾರು 1.95 ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net