ಆರ್‌ಬಿಐ ನಿವೃತ್ತ ಅಧಿಕಾರಿ ಮನೆಯಲ್ಲಿ ಕಳವು

Ksd_Temple Theft
Published on

ಮೈಸೂರು: ಭಾರತೀಯ ರಿಸರ್ವ್ ಬ್ಯಾಂಕ್ ನಿವೃತ್ತ ಅಧಿಕಾರಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು ನಗದು ಸೇರಿದಂತೆ 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.

ವಿಜಯ ನಗರ ನಾಲ್ಕನೇ ಹಂತದಲ್ಲಿ ನೆಲೆಸಿರುವ ಆರ್‌ಬಿಐ ನಿವೃತ್ತ ಎಂಡಿ ರವಿಕುಮಾರ್ ಅವರ ಮನೆಯಲ್ಲಿ ಕಳವು ನಡೆದಿದೆ. ರವಿ ಕುಮಾರ್ ಶನಿವಾರ ಬೆಂಗಳೂರಿಗೆ ತೆರಳಿ ಸೋಮವಾರ ರಾತ್ರಿ ಮನೆಗೆ ಮರಳಿದ ಸಂದರ್ಭ ಕಳವು ನಡೆದಿರುವುದು ತಿಳಿದು ಬಂತು. ಕಳ್ಳರು ಕಳ್ಳತನದ ಮಾಹಿತಿ ದೊರೆಯಬಾರದು ಎಂಬ ಉದ್ದೇಶದಿಂದ ಸಿಸಿ ಕ್ಯಾಮರಾಗಳನ್ನು ನಾಶ ಪಡಿಸಿದ್ದಾರೆ. ಕಳ್ಳರು ಮನೆಯ ಹಿಂಬಾಗಿಲು ಮುರಿದು ಒಳ ಪ್ರವೇಶಿಸಿದ್ದಾರೆ. ಬೀರುವಿನಲ್ಲಿಟ್ಟಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net