

ಚನ್ನಪಟ್ಟಣ
ಮಾರುತಿ ಓಮ್ಮಿ ಕಾರೊಂದು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಸಾತನೂರು ರಸ್ತೆಯಲ್ಲಿ ಬುಧವಾರ ನಡೆಯಿತು.
ಸಾತನೂರು ರಸ್ತೆಯ ಕ್ರಾಫ್ಟ್ ಪಾರ್ಕ್ ಮುಂಭಾಗ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಘಟನೆಯಿಂದ ಯಾವುದೇ ಅಪಾಯ ಆಗಿಲ್ಲ. ಚಾಂದ್ ಎಂಬುವರಿಗೆ ಸೇರಿದ ಕಾರ್ ಇದ್ದಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ನಡೆದಿದೆ ಎನ್ನಲಾಗಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ, ಕಾರಿನ ಮಾಲೀಕ ಕಾರ್ ನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಷಣಾರ್ಧದಲ್ಲೇ ಇಡೀ ಕಾರು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.