

ಮಡಿಕೇರಿ:
ಬಾಳೆಲೆ, ಪೊನ್ನಪ್ಪಸಂತೆ, ಮಾಯಮುಡಿ ಭಾಗದ ಶಾಲಾ ವಿದ್ಯಾರ್ಥಿಗಳಿಗೆ ಹತ್ತನೇ ತರಗತಿ ಪರೀಕ್ಷಾ ಕೇಂದ್ರ ಪೊನ್ನಂಪೇಟೆ ತಾಲೂಕು ತಿತಿಮತಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡುವ ಮೂಲಕ ಖಾಸಗಿ ಬಸ್ ಮಾಲೀಕರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಪರೀಕ್ಷೆ ಮುಗಿದೊಡನೆ ಮನೆಗೆ ಮರಳಲು ಬಸ್ ವ್ಯವಸ್ಥೆ ಇಲ್ಲದ್ದನ್ನು ಗಮನಿಸಿದ ಜಯಲಕ್ಷಿö್ಮÃ ಬಸ್ ಮಾಲೀಕÀ ಕಾಡೇಮಾಡ ಗೌತಮ್ ತಮ್ಮ ಬಸ್ ಅನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒದಗಿಸಿದ್ದಾರೆ.
ಮಕ್ಕಳು ಬೇಗ ಮನೆ ಸೇರಿ ಮುಂದಿನ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿಕೊಳ್ಳುವ ನಿಟ್ಟಿನಲ್ಲಿ ಹತ್ತನೇ ತರಗತಿ ಪರೀಕ್ಷೆ ಮುಗಿದೊಡನೆ ತಿತಿಮತಿಯಿಂದ ಬಾಳೆಲೆಗೆ ವಿಶೇಷ ಬಸ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇದು ಬಾಳೆಲೆ ಮತ್ತು ಪೊನ್ನಪ್ಪಸಂತೆ ಭಾಗದ ಕನ್ನಡ ಮಾಧ್ಯಮ ಮಕ್ಕಳಿಗೆ ಅನೂಕೂಲಕರವಾಗಿದೆ. ಬಸ್ ಮಾಲಿಕರ ಈ ಕಾರ್ಯ ಶ್ಲಾಘನೀಯ ಎಂದು ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.