ಬಸ್ ಪಲ್ಟಿಯಾಗಿ ಮೂವರಿಗೆ ಗಾಯ

web 4
Published on

ಧಾರವಾಡ: ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ತಾಲೂಕಿನ ಶಿವಳ್ಳಿ ಬಳಿ ಸೋಮವಾರ ಸಂಜೆ ನಡೆದಿದೆ. ಧಾರವಾಡದಿಂದ ನವಲಗುಂದಕ್ಕೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂವರು ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ರವಾನೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net