ಬಸ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

udp-17-accident
Published on

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ತ್ರಿವೇಣಿ ಸರ್ಕಲ್ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.

ರಾಜಶೇಖರ ಪೂಜಾರಿ (68) ಮೃತರು. ಇವರು ಸೋಮವಾರ ಬೆಳಿಗ್ಗಿನ ಜಾವ 4.15ಕ್ಕೆ ತ್ರಿವೇಣಿ ಹೋಟೇಲಿಗೆ ಕೆಲಸಕ್ಕೆ ಹೋಗುತ್ತಿದ್ದಾಗ ಉಡುಪಿ ಕೆಎಮ್ ಮಾರ್ಗ ಕಡೆಯಿಂದ ಉಡುಪಿ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ನಾಗರಾಜ ಎಂಬಾತ ದುಡುಕುತನ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ರಸ್ತೆಯ ತೀರಾ ಬಲಬದಿಗೆ ಬಂದು ರಸ್ತೆ ದಾಟಿ ರಸ್ತೆಯ ಪೂರ್ವ ದಿಕ್ಕಿನ ಅಂಚಿನಲ್ಲಿದ್ದ ರಾಜಶೇಖರ ಪೂಜಾರಿ ಅವರಿಗೆ ಡಿಕ್ಕಿಹೊಡೆದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಕೂಡಲೇ ಅವರನ್ನು ಚಿಕಿತ್ಸೆಗೆ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜವಾಗಿಲ್ಲ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net